ಗಡಿ ವಿವಾದ ಪ್ರಸ್ತಾಪಿಸುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತೆ ಕನ್ನಡಿಗರನ್ನು ಕೆರಳುವಂತೆ ಮಾಡಿದ್ದಾರೆ.
ಟ್ವೀಟ್ ಮಾಡಿ ಮತ್ತೆ ಗಡಿ ವಿವಾದ ಭುಗಿಲೇಳುವಂತೆ ಮಾಡಿದ್ದಾರೆ. ಬೆಳಗಾವಿ ಗಡಿಯ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉದ್ಧವ ಠಾಕ್ರೆ ಹೇಳಿದ್ದಾರೆ.
ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ಹೋರಾಟದಲ್ಲಿ ಮಡಿದವರಿಗೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸುವ ಗೌರವ ಇದಾಗಿದೆ ಎಂದು ಹೇಳಿದ್ದಾರೆ.
ಈ ಪ್ರಾಂತ್ಯಗಳು ಮಹಾರಾಷ್ಟ್ರಕ್ಕೆ ಸೇರದಿದ್ದರೆ ಬಲಿದಾನ ವ್ಯರ್ಥವಾಗುತ್ತದೆ. ಹಾಗಾಗಿ ಹೋರಾಟ ಮುಂದುವರೆಸೋಣ. ಎಲ್ಲರೂ ಒಗ್ಗಟ್ಟಿನಿಂದ ಕಟಿಬದ್ಧರಾಗಿ ಹೋರಾಟ ನಡೆಸೋಣ ಎಂದು ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದು, ಈ ವಿವಾದಿತ ಟ್ವೀಟ್ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಕೂಡ ಕನ್ನಡಿಗರು ಕೆರಳುವಂತೆ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದಾಗ ಹೋರಾಟಗಾರರಿಗೆ ಗೌರವ ಸಿಗುತ್ತದೆ. ಏಕೀಕರಣದ ವೇಳೆ ಮಹಾರಾಷ್ಟ್ರಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಮೂಲಕ ಕನ್ನಡಿಗರನ್ನು ಕೆಣಕಿದ್ದಾರೆ.