ಬಾಬರಿ ಮಸೀದಿ-ರಾಮ ಮಂದಿರ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದ ನಂತ್ರ ರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. ರಾಮ ಮಂದಿರಕ್ಕೆ ಭಕ್ತರಿಂದ ಹಣ ಹರಿದು ಬರ್ತಿದೆ. ಮೂಲಗಳ ಪ್ರಕಾರ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
ದಿಗ್ವಿಜಯ್ ಸಿಂಗ್, ರಾಮ ಮಂದಿರ ನಿರ್ಮಾಣಕ್ಕಾಗಿ 1 ಲಕ್ಷ 11 ಸಾವಿರದ 111 ರೂಪಾಯಿ ನೀಡಿದ್ದಾರೆ. ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಮೂಲಕ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಹಣ ಕಳುಹಿಸಿದ್ದಾರೆ. ದಿಗ್ವಿಜಯ್ ಸಿಂಗ್, ಮೋದಿಗೆ ಪತ್ರ ಕೂಡ ಬರೆದಿದ್ದಾರೆ. ಸೌಹಾರ್ಧಯುತವಾಗಿ ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
ಕಳೆದ ಎರಡು ದಿನಗಳಿಂದ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂದಿದೆ. ಎರಡು ದಿನಗಳಲ್ಲಿ 100 ಕೋಟಿ ರೂಪಾಯಿ ದೇಣಿಗೆ ಬಂದಿದೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಾಧ್ಯಮಗಳ ಮುಂದೆ ಈ ವಿಷ್ಯವನ್ನು ತಿಳಿಸಿದ್ದಾರೆ.