ಬೆಂಗಳೂರು: 12 ನೇ ತರಗತಿಯವರೆಗೆ ಉಚಿತ ಶಿಕ್ಷಣ, ಪ್ರತಿ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
2023 ರಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಪ್ರತಿಗೆ ಕುಟುಂಬಕ್ಕೆ ಒಂದು ಸೂರು, ಎಲ್ಕೆಜಿಯಿಂದ 12 ನೇ ತರಗತಿಯವರೆಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ, ರಾಜ್ಯದ ಎಲ್ಲಾ ಜನರಿಗೆ ಆರೋಗ್ಯ ಸೌಲಭ್ಯ, ರೈತರಿಗೆ ಸಾಲ ಮುಕ್ತ ಬದುಕು, ಯುವಕರಿಗೆ ಉದ್ಯೋಗ ನೀಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಾಗಿ ಅವರು ಹೇಳಿದ್ದಾರೆ.
ಯೋಜನೆಗಳನ್ನು ಜಾರಿಗೆ ತರದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ. ಜನವರಿ 29, 30ರಂದು ಪಕ್ಷ ಸಂಘಟನೆ ಪ್ರವಾಸ ಕೈಗೊಳ್ಳಲಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರೆ ಪಂಚರತ್ನ ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೆಚ್.ಡಿ.ಕೆ. ತಿಳಿಸಿದ್ದಾರೆ.