ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ವಿವಿಧೆಡೆಯಿಂದ ರಾಜಧಾನಿಗೆ ಆಗಮಿಸಿದ ರೈತರು, ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ನಿನ್ನೆ ರಾತ್ರಿಯಿಂದಲೇ ಮಾರ್ಗಮಧ್ಯದಲ್ಲೇ ಪ್ರತಿಭಟನಾಕಾರರನ್ನು ತಡೆಯಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಪ್ರತಿಭಟಿಸುವ ಹಕ್ಕನ್ನು ಕಸಿಯುವ ಅಧಿಕಾರ ಯಾರಿಗೂ ಇಲ್ಲ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಪೊಲೀಸರು ತಡೆದರೂ ಇರುವ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಎಂದು ಕರೆ ನೀಡಿದ್ದಾರೆ.