ಕೊರೊನಾ ಲಸಿಕೆ ಸ್ವೀಕರಿಸಿದ ಒಂದು ದಿನದ ಬಳಿಕ ತೆಲಂಗಾಣದ 42 ವರ್ಷದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಸಿಬ್ಬಂದಿ ಸಾವಿಗೂ ಕೊರೊನಾ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ತೆಲಂಗಾಣ ಸರ್ಕಾರ ಸ್ಪಷ್ಟನೆ ನೀಡಿದೆ. ಮರಣೋತ್ತರ ಪರೀಕ್ಷೆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.
ಸಾರ್ವಜನಿಕ ಆರೋಗ್ಯ ಹಾಗೂ ಕಲ್ಯಾಣ ಇಲಾಖೆ ನಿರ್ದೇಶಕ ಈ ವಿಚಾರವಾಗಿ ಮಾತನಾಡಿ, ಜನವರಿ 19ರಂದು ಕುಂತಲಾ ಪಿಹೆಚ್ಸಿಯಲ್ಲಿ ಈ ಸಿಬ್ಬಂದಿ ಲಸಿಕೆ ಸ್ವೀಕರಿಸಿದ್ದರು. ಲಸಿಕೆ ಸ್ವೀಕಾರ ಮಾಡಿದ ಬಳಿಕ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತಾದರೂ ಅವರು ಮುಂಜಾನೆ 5:30ರ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ರು.
ಪ್ರಾಥಮಿಕ ಮಾಹಿತಿಯ ಪ್ರಕಾರ ಲಸಿಕೆಯಿಂದ ಈ ಸಾವು ಸಂಭವಿಸಿಲ್ಲ ಎನ್ನಲಾಗಿದೆ. ಮಾರ್ಗಸೂಚಿಗಳ ಅನುಸಾರ ಮರಣೋತ್ತರ ಪರೀಕ್ಷೆ ನಡೆಸಲಿದ್ದೇವೆ ಎಂದೂ ಅವರು ಇದೇ ವೇಳೆ ಹೇಳಿದ್ರು .