ಬೆಂಗಳೂರು: ಕರ್ನಾಟಕ ಸತತ ಎರಡನೇ ಬಾರಿಗೆ ಅಗ್ರಮಾನ್ಯ ನಾವಿನ್ಯತಾ ರಾಜ್ಯ ಸೂಚ್ಯಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ಉಪಮುಖ್ಯಮಂತ್ರಿ ಮತ್ತು ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. ನೀತಿ ಆಯೋಗವು ಪ್ರಕಟಿಸುವ ನಾವಿನ್ಯತಾ ಸೂಚ್ಯಂಕ ಪಟ್ಟಿಯಲ್ಲಿ ಕಳೆದ ವರ್ಷ ಕೂಡ ಕರ್ನಾಟಕ ಮೊದಲ ಸ್ಥಾನ ಪಡೆದುಕೊಂಡಿತ್ತು.
ದೇಶ, ರಾಜ್ಯ, ಜಿಲ್ಲಾ ಮಟ್ಟಗಳಲ್ಲಿ ನಾವಿನ್ಯತೆ ನಿರ್ದೇಶಿಸುವ ವಿವಿಧ ಅಂಶಗಳ ವಿಶ್ಲೇಷಣೆ ಒದಗಿಸುವ ನಾವಿನ್ಯತಾ ಸೂಚ್ಯಂಕ ಇದಾಗಿದೆ. ನಾವಿನ್ಯತಾ ಸೂಚಂಕ ಪಟ್ಟಿಯಲ್ಲಿ 17 ಪ್ರಮುಖ ರಾಜ್ಯಗಳ ಪೈಕಿ ಹರಿಯಾಣ ರಾಜ್ಯಕ್ಕೆ ಆರನೇ ಸ್ಥಾನ, ಬಿಹಾರಕ್ಕೆ ಕೊನೆಯ ಸ್ಥಾನವಿದೆ.
ಮಾನವ ಸಂಪನ್ಮೂಲ, ಹೂಡಿಕೆ, ವಿಷಯತಜ್ಞರು, ಉದ್ಯಮ ಸ್ನೇಹಿ ವಾತಾವರಣ, ಸುರಕ್ಷತೆ, ಉತ್ತಮ ಕಾನೂನು, ಸಾಧನೆ, ಜ್ಞಾನಪ್ರಸಾರ, ಆರೋಗ್ಯ, ಶಿಕ್ಷಣ, ಕೃಷಿ ಸೇರಿದಂತೆ ಮೊದಲಾದ ಅಂಶಗಳನ್ನು ಪರಿಗಣಿಸಿ ಈ ಪಟ್ಟಿಯಲ್ಲಿ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದೆ.