alex Certify ಅಬಕಾರಿ ಖಾತೆಯಲ್ಲಿ ನಾನು ಮಾಡುವಂಥದ್ದು ಏನೂ ಇಲ್ಲ ಎಂದ ಎಂಟಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬಕಾರಿ ಖಾತೆಯಲ್ಲಿ ನಾನು ಮಾಡುವಂಥದ್ದು ಏನೂ ಇಲ್ಲ ಎಂದ ಎಂಟಿಬಿ

ಬೆಂಗಳೂರು: ವಸತಿ ಖಾತೆ ಕೈತಪ್ಪಿದ್ದಕ್ಕೆ ಸಚಿವ ಎಂಟಿಬಿ ನಾಗರಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮಗೆ ನೀಡಿರುವ ಅಬಕಾರಿ ಖಾತೆ ಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ಅಬಕಾರಿ ಖಾತೆಯಲ್ಲಿ ನಾನು ಮಾಡುವಂಥದ್ದು ಏನೂ ಇಲ್ಲ. ನಾನು ಈ ಹಿಂದೆ ವಸತಿ ಸಚಿವನಾಗಿದ್ದೆ. ಸಾರ್ವಜನಿಕರಿಗೆ ಒಳ್ಳೆಯದಾಗುವ, ಬಡವರಿಗೆ ಸಹಾಯ ಮಾಡುವಂತಹ ಖಾತೆ ನಾನು ಕೇಳಿದ್ದೆ. ವಸತಿ ಖಾತೆಯಲ್ಲಾದರೆ ಮನೆ ಕೊಡುವ, ಕಾಮಗಾರಿ ಮಾಡಿಸಿಕೊಡುವ ಕೆಲಸವಿರುತ್ತದೆ. ಅಬಕಾರಿ ಖಾತೆ ಪಡೆದು ನಾನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಬಗ್ಗೆ ನಾನು ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ನನಗೆ ಅಬಕಾರಿ ಖಾತೆ ಬೇಡ ಬದಲಿಸುವಂತೆ ತಿಳಿಸಿದ್ದೇನೆ. ಸಂಜೆ ಮತ್ತೆ ಸಿಎಂ ಭೇಟಿಯಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...