ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ವಾಪಸ್ಸಾಗಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ತಂಡದ ಸದಸ್ಯರು ಕಡ್ಡಾಯ ಆರ್ಟಿ – ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಎಂಸಿ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. ಮುಂದಿನ 7 ದಿನಗಳವರೆಗೂ ಆಟಗಾರರಿಗೆ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದ್ರು.
ಬಿಎಂಸಿ ಸೂಚನೆಯಂತೆ ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಆಟಗಾರರಾದ ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಹಾಗೂ ಪ್ರಥ್ವಿ ಶಾ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕೂಡ ಬೆಳಗ್ಗೆ ಮುಂಬೈಗೆ ಬಂದಿಳಿದಿದ್ದು ಕ್ವಾರಂಟೈನ್ಗೆ ಒಳಗಾಗಿದ್ದಾರೆ.