ಮಹಾರಾಷ್ಟ್ರದ ಪುಣೆಯಲ್ಲಿರುವ ಕೊರೊನಾ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್ಸ್ಟಿಟ್ಯೂಟ್ ನ ಟರ್ಮಿನಲ್ 1 ರಲ್ಲಿ ಭಾರಿ ಆಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸೈರಸ್ ಪೂನಾವಾಲಾ ಹಾಗೂ ಆದಾರ್ ಪೂನಾವಾಲಾ ನೇತೃತ್ವದ ಈ ಸಂಸ್ಥೆ ಮಹಾಮಾರಿ ಕೊರೊನಾ ವಿರುದ್ದ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದ್ದು, ಈಗಾಗಲೇ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ.
ಅಗ್ನಿ ಅವಘಡ ಸಂಭವಿಸಿರುವ ವಿಷಯ ತಿಳಿಯುತ್ತಿದ್ದಂತೆಯೇ 10 ಕ್ಕೂ ಅಧಿಕ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.