ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ತಂದೆ ತಾಯಿ ಇಲ್ಲದಿದ್ದರೆ, ಪೋಷಕರು ಗಂಡು ಮಕ್ಕಳು ಇಲ್ಲದಿದ್ದರೆ ಮದುವೆಯಾಗಿರುವ ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ಉದ್ಯೋಗ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ಉದ್ಯೋಗ ನೀಡುವ ಸಂಬಂಧಿತ ನಿಯಮಗಳಿಗೆ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಕರ್ನಾಟಕ ನಾಗರೀಕ ಸೇವಾ ತಿದ್ದುಪಡಿ ನಿಯಮ 2020ಕ್ಕೆ ಸಂಪುಟ ಅನುಮೋದನೆ ನೀಡಿದೆ. ಅನುಕಂಪದ ಆಧಾರದ ಮೇಲೆ ಉದ್ಯೋಗ ನೇಮಕಾತಿ ಸಂಬಂಧ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.