ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂಪಾಯಿಗಳನ್ನು 3 ಕಂತುಗಳಲ್ಲಿ ನೀಡಲಾಗುತ್ತಿದೆ. ಇದನ್ನು 10 ಸಾವಿರ ರೂಪಾಯಿಗೆ ಏರಿಕೆ ಮಾಡುವ ಕುರಿತು ಸಮಾಲೋಚನೆ ನಡೆದಿದೆ. ಬಜೆಟ್ನಲ್ಲಿ ರೈತರಿಗೆ 10 ಸಾವಿರ ರೂ. ಕೊಡುಗೆ ನೀಡುವ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.