ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಅಧಿಕಾರಕ್ಕೇರಬೇಕೆನ್ನುವ ಬಿಜೆಪಿ ಕನಸು ಈ ಬಾರಿಯೂ ನನಸಾಗುವ ಸಾಧ್ಯತೆ ಇಲ್ಲವೆನ್ನಲಾಗಿದೆ.
ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸೋಲು -ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಎಬಿಪಿ ಮತ್ತು ಸಿ – ವೋಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನುವುದು ಗೊತ್ತಾಗಿದೆ. ಬಂಗಾಳದಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿದರೂ ಮಮತಾ ಬ್ಯಾನರ್ಜಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದ್ದಾರೆ. ಅದೇ ರೀತಿ ಕೇರಳದಲ್ಲಿ ಮತ್ತೆ ಪಿಣರಾಯಿ ವಿಜಯನ್ ಅಧಿಕಾರಕ್ಕೆ ಬರಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.