ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶಶಿಕಲಾ ಕಳೆದ ಎರಡು ಮೂರು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ತೊಂದರೆ, ಜ್ವರ, ಬೆನ್ನುನೋವಿನಿಂದ ಬಳಲುತ್ತಿದ್ದ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಾರದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಶಶಿಕಲಾ ಅವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು, ಇದೀಗ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಶಶಿಕಲಾ ಅವರು ಜನವರಿ 27ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಇದೀಗ ಕೊರೊನಾ ಹಿನ್ನೆಲೆಯಲ್ಲಿ 10 ದಿನಗಳಾದರೂ ಆಸ್ಪತ್ರೆಯಲ್ಲಿಯೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ.