ಬಿಹಾರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟರೆ ಜೈಲೂಟ ಫಿಕ್ಸ್..! 22-01-2021 5:51PM IST / No Comments / Posted In: Latest News, India ಬಿಹಾರ ಸರ್ಕಾರದ ವಿರುದ್ಧ ಆಕ್ರಮಣಕಾರಿ ಪೋಸ್ಟ್ಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ರೆ ಜೈಲುಪಾಲಾಗೋದು ಗ್ಯಾರಂಟಿ. ಏಕೆಂದರೆ ಬಿಹಾರದ ಸೈಬರ್ ಕ್ರೈಂ ವಿಭಾಗದಲ್ಲಿ ಇಂತಹದ್ದೊಂದು ಕಾನೂನನ್ನ ತರಲು ಬಿಹಾರ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಅಪರಾಧ ವಿಭಾಗದ ಮುಖ್ಯಸ್ಥರಾದ ಐ.ಜಿ. ನಯ್ಯರ್ ಹಸ್ನೈನ್ ಖಾನ್ ಬಿಹಾರ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಕೆಲ ವ್ಯಕ್ತಿಗಳು ಹಾಗೂ ಸಂಸ್ಥೆಗಳು ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿ ಟೀಕೆ ಮಾಡ್ತಿರೋದು ಬೆಳಕಿಗೆ ಬಂದಿದೆ. ಇಂತಹ ಕೃತ್ಯಗಳನ್ನ ಸೈಬರ್ ಅಪರಾಧ ಎಂದು ಪರಿಗಣಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇನ್ನು ಬಿಹಾರ ಸರ್ಕಾರದ ಈ ಕ್ರಮವನ್ನ ಪ್ರತಿಪಕ್ಷ ನಾಯಕ ತೇಜಶ್ವಿ ಯಾದವ್ ಖಂಡಿಸಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ಹಿಟ್ಲರ್ ಹಾದಿಯನ್ನೇ ಅನುಸರಿಸುತ್ತಿದ್ದಾರೆ. ನಮ್ಮೆಲ್ಲರ ವಾಕ್ ಸ್ವಾತಂತ್ರ್ಯದ ಹರಣವಾಗಿದೆ ಎಂದು ಟ್ವಿಟರ್ನಲ್ಲಿ ಖಂಡಿಸಿದ್ದಾರೆ. हिटलर के पदचिन्हों पर चल रहे मुख्यमंत्री की कारस्तानियां *प्रदर्शनकारी चिह्नित धरना स्थल पर भी धरना-प्रदर्शन नहीं कर सकते *सरकार के ख़िलाफ लिखने पर जेल *आम आदमी अपनी समस्याओं को लेकर विपक्ष के नेता से नहीं मिल सकते नीतीश जी, मानते है आप पूर्णत थक गए है लेकिन कुछ तो शर्म किजीए pic.twitter.com/k6rtriCJ3x — Tejashwi Yadav (@yadavtejashwi) January 22, 2021