ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ 9 ಹಿರಿಯ ವಿದ್ಯಾರ್ಥಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಈ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ. ಬಿ ಫಾರ್ಮಾ ಮೊದಲ ವರ್ಷದ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದಾರೆ. ಜನವರಿ 10 ರಂದು ಹಾಸ್ಟೆಲಿಗೆ ತೆರಳುತ್ತಿದ್ದ ವಿದ್ಯಾರ್ಥಿಯನ್ನು ಕರೆಸಿಕೊಂಡ ಹಿರಿಯ ವಿದ್ಯಾರ್ಥಿಗಳು ಹೇರ್ ಕಟ್ ಮಾಡಿಸಿ, ಮೀಸೆ ತೆಗೆಯುವಂತೆ ತಾಕೀತು ಮಾಡಿದ್ದಾರೆ. ಅಲ್ಲದೆ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು, ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇತರ ನಾಲ್ವರು ವಿದ್ಯಾರ್ಥಿಗಳ ಮೇಲೆಯು ಆರೋಪಿತರು ರ್ಯಾಗಿಂಗ್ ಮಾಡಿರುವುದು ಗೊತ್ತಾಗಿದೆ.