ನೆತ್ತಿಯಲ್ಲಿ ತೇವಾಂಶ ಕಡಿಮೆಯಾದಾಗ ತಲೆಹೊಟ್ಟಿನ ಸಮಸ್ಯೆ ಕಾಡುತ್ತದೆ. ತಲೆಯಲ್ಲಿ ಹೊಟ್ಟು ಹೆಚ್ಚಾದಾಗ ಕೂದಲಿನ ಬುಡ ದುರ್ಬಲಗೊಂಡು ಕೂದಲು ಉದುರುತ್ತದೆ. ಇದು ಹೆಚ್ಚಾದರೆ ಬೊಕ್ಕ ತಲೆ ಸಮಸ್ಯೆ ಕಾಡಬಹುದು. ಹಾಗಾಗಿ ತಲೆ ಹೊಟ್ಟಿನ ಸಮಸ್ಯೆಯನ್ನು ಮೊದಲು ನಿವಾರಿಸಿಕೊಳ್ಳಬೇಕು ಅದಕ್ಕಾಗಿ ಈ ಮನೆಮದ್ದನ್ನು ಬಳಸಿ.
*1 ಚಮಚ ಜೇನುತುಪ್ಪ ಮತ್ತು 1 ನಿಂಬೆ ಹಣ್ಣಿನ ರಸವನ್ನು ತೆಗೆದುಕೊಂಡು ಮಿಕ್ಸ್ ಮಾಡಿ ಕೂದಲನ್ನು ಒದ್ದೆ ಮಾಡಿ ನೆತ್ತಿಗೆ ಹಚ್ಚಿ 15 ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ತಣ್ಣೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ ಒಮ್ಮೆ ಮಾಡಿದರೆ ತಲೆ ಹೊಟ್ಟಿನ ಸಮಸ್ಯೆ ದೂರವಾಗುತ್ತದೆ.
*1 ಚಮಚ ವಿನೆಗರ್ ಗೆ 1 ಚಮಚ ಟೀ ಟ್ರೀ ಆಯಿಲ್ ಮಿಕ್ಸ್ ಮಾಡಿ ನೆತ್ತಿಗೆ ಹಚ್ಚಿ 15 ನಿಮಿಷಗಳ ಕಾಲ ಮಸಾಜ್ ಮಾಡಿ. 2 ಗಂಟೆಗಳ ಕಾಲ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ ಒಮ್ಮೆ ಮಾಡಿ.
*1 ಕಪ್ ಮೊಸರಿಗೆ 1 ಚಮಚ ತೆಂಗಿನೆಣ್ಣೆ ಮಿಕ್ಸ್ ಮಾಡಿ ನೆತ್ತಿಗೆ ಹಚ್ಚಿ 1 ಗಂಟೆಗಳ ಕಾಲ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ ಒಮ್ಮೆ ಮಾಡಿದರೆ ತಲೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.