ಶಿವಮೊಗ್ಗ: ಅಕ್ರಮ ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಸಕ್ರಮಕ್ಕೆ ಅರ್ಜಿ ಹಾಕಬೇಕು. ಬೇಬಿಬೆಟ್ಟ ಸಮೀಪ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಇದರಿಂದ ಕೆ.ಆರ್.ಎಸ್. ಜಲಾಶಯಕ್ಕೆ ಸಮಸ್ಯೆಯಾಗುತ್ತದೆ. ಕೂಡಲೇ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.
ಶಿವಮೊಗ್ಗದ ಕಲ್ಲು ಗಣಿ ಪ್ರದೇಶದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತನಿಖೆಯ ಬಳಿಕ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.