ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ತಮ್ಮ ಮಕ್ಕಳೊಂದಿಗಿನ ಫೋಟೋ ಹಂಚಿಕೊಳ್ಳುವ ಮೂಲಕ ತಮ್ಮ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು ಬಳಸಿಕೊಂಡಿದ್ದಾರೆ.
ಪ್ರೀತಿಯ ಆರೈಕೆ ಮತ್ತು ಅವಕಾಶಗಳು ನಮ್ಮ ಹುಡುಗಿಯರಿಗೆ ಮತ್ತು ಹುಡುಗರಿಗೆ ಯಾವಾಗಲೂ ಸಮನಾಗಿರಬೇಕು. ನಮ್ಮ ಮಕ್ಕಳು ನಮ್ಮಿಂದಲೇ ಕಲಿಯುತ್ತಾರೆ. ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು. ಸರಿಯಾದ ಉದಾಹರಣೆಯನ್ನು ಹೊಂದಿಸಿ ಹೆಣ್ಣುಮಕ್ಕಳಿಗೆ ಮತ್ತು ಗಂಡುಮಕ್ಕಳಿಗೆ ಎಲ್ಲಾ ಸಮಾನಾಗಿ ನೋಡಬೇಕು ಎಂದು ಬರೆದುಕೊಂಡಿದ್ದಾರೆ.