ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಹುಣಸೋಡು ಕಲ್ಲು ಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ನಾಳೆ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಎಲ್ಲರನ್ನೂ ಬಂಧಿಸಲಾಗುವುದು. ಸ್ಫೋಟಕ ವಸ್ತು ಎಲ್ಲಿಂದ ಬಂದಿದೆ? ಪೂರೈಕೆ ಮಾಡಿದವರು ಯಾರು? ಎಲ್ಲರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಹೈದರಾಬಾದ್ ಎಫ್ಎಸ್ಎಲ್ ತಂಡದ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 76 ಅಧಿಕೃತ ಕ್ವಾರೆಗಳಿವೆ. 23 ಕ್ಕೆ ಮಾತ್ರ ಸಣ್ಣ ಪ್ರಮಾಣದ ಸ್ಪೋಟಕ್ಕೆ ಅನುಮತಿ ಇದೆ. 76 ಕ್ವಾರೆಗಳವರು ಸ್ಪೋಟಕ ಬಳಕೆಗೆ ಜಿಲ್ಲಾಡಳಿತದ ಅನುಮತಿ ಪಡಿಯಬೇಕಿದೆ. ಜಿಲ್ಲೆಯಲ್ಲಿ 100 ಕ್ಟಷರ್ ಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.