ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪರೇಡ್ ವಿಚಾರವಾಗಿ ಕಿಡಿಕಾರಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರೈತ ಮುಖಂಡರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರೈತರು ತಾವು ಯಾಕೆ ಪ್ರತಿಭಟನೆ ನಡೆಸುತ್ತಿದ್ದೇವೆ, ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತಿದ್ದೇವೆ ಎಂಬುದೇ ಅವರಿಗೆ ಗೊತ್ತಿಲ್ಲ. ಶಾಂತಿಯುತ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಅವರು ಯಾವ ಬೇಡಿಕೆ ಇಟ್ಟುಕೊಂಡು ಹೋರಾಡಿದ್ದಾರೋ ಈಗಾಗಲೇ ಪ್ರಧಾನಿ ಮೋದಿ ಅವರ ಬೇಡಿಕೆ ಪೂರೈಸಿದ್ದಾರೆ ಎಂದರು.
ಟ್ರ್ಯಾಕ್ಟರ್ ರ್ಯಾಲಿಯಿಂದ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯಾಗಲಿದೆ ಎಂದು ಟ್ರ್ಯಾಕ್ಟರ್ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. 125 ಟ್ರ್ಯಾಕ್ಟರ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.