ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಗೃಹ ಕಾರ್ಯದರ್ಶಿ ಅಜಯ್ ಭಾಲಿಯಾ ಪತ್ರ ಬರೆದಿದ್ದು, ಇದರಲ್ಲಿ ದೇಶದಲ್ಲಿ ಬಳಕೆಯಾಗುತ್ತಿರುವ ಕೊರೊನಾ ಲಸಿಕೆಗಳ ವಿರುದ್ಧ ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಣ್ಣಿಡುವಂತೆ ಹೇಳಿದ್ದಾರೆ.
ಭಾರತದಲ್ಲಿ ಪ್ರಸ್ತುತ ಬಳಕೆಯಾಗುತ್ತಿರುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ. ಆದರೆ ಕೆಲ ವ್ಯಕ್ತಿಗಳು ಈ ಲಸಿಕೆಯ ವಿರುದ್ಧ ಸುಳ್ಳು ಮಾಹಿತಿ ಹರಡುತ್ತಾ ಇರೋದ್ರಿಂದ ಜನರಲ್ಲಿ ಗೊಂದಲ ಏರ್ಪಡುತ್ತಿದೆ.
ಹೀಗಾಗಿ ಇಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.