ನವದೆಹಲಿ: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿರುವ ಕ್ರಮವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ.
ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದಕ್ಕೆ ವಿಷಾದ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಯಾವುದೇ ಸಮಸ್ಯೆಗೆ ಹಿಂಸಾಚಾರ ಪರಿಹಾರವಲ್ಲ. ಹಿಂಸಾಚಾರದಲ್ಲಿ ಯಾರಿಗಾದರೂ ತೊಂದರೆಯಾದರೆ ದೇಶಕ್ಕೆ ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೆಂಪುಕೋಟೆಯಲ್ಲಿ ಧ್ವಜವೇರಿಸಿರುವ ಪ್ರತಿಭಟನಾಕಾರರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಶಿ ತರೂರ್, ಇದು ದುರದೃಷ್ಟಕರ ಸಂಗತಿ. ರೈತರ ಪ್ರತಿಭಟನೆಗೆ ನನ್ನ ಬೆಂಬಲವಿದೆ. ಆದರೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವ ರೀತಿ ಕ್ಷಮಿಸಲು ಸಾಧ್ಯವಿಲ್ಲ. ಕೆಂಪುಕೋಟೆಯಲ್ಲಿ ಪವಿತ್ರ ತ್ರಿವರ್ಣಧ್ವಜ ಮಾತ್ರ ಹಾರಬೇಕು ಹೊರತು ಬೇರೆ ಧ್ವಜವಲ್ಲ ಎಂದು ಟ್ವೀಟ್ ಮಾಡಿದ್ದಾರೆ.