
ನವದೆಹಲಿ: ಕೇಂದ್ರ ಸಚಿವರಾಗಿದ್ದ ದಿ. ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.
ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಧನ್ಯವಾದ ಹೇಳಿದ್ದಾರೆ. ನಮ್ಮ ತಂದೆಯ ಕೊನೆ ಉಸಿರಿರುವವರೆಗೂ ಪ್ರಧಾನಿ ಮೋದಿ ಕಾಳಜಿ ತೋರಿದ್ದರು. ಅವರು ಹೋದ ನಂತರವೂ ಗೌರವ ನೀಡಿದ್ದಾರೆ ಎಂದು ಹೇಳಿದ್ದಾರೆ.