ಬೆಂಗಳೂರು: ಕಳೆದ 4 ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಇಂದು ಬಿಡುಗಡೆಯಾಗಲಿದ್ದಾರೆ.
ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಶಶಿಕಲಾ ನಟರಾಜನ್ ಬುಧವಾರ ಜೈಲುಶಿಕ್ಷೆ ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದು, ಅವರೊಂದಿಗೆ ಅವರ ಆಪ್ತೆ ಇಳವರಸಿ ಮತ್ತು ಸೋದರ ಸಂಬಂಧಿ ಸುಧಾಕರ್ ಕೂಡ ಬಿಡುಗಡೆಯಾಗಲಿದ್ದಾರೆ. ಜೈಲ್ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಶಶಿಕಲಾ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಲಾಗಿದೆ.