ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ ಪ್ರಕಟಗೊಂಡಿದೆ. ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂಬರ್ ಒನ್ ಸ್ಥಾನ ಕಾಯ್ದುಕೊಂಡಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಬೌಲರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯದಲ್ಲಿ 89 ಮತ್ತು 63 ರನ್ ಗಳಿಸಿದ್ದರು. ಕೊಹ್ಲಿ 870 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಗಾಯದ ಕಾರಣ ರೋಹಿತ್ ಶರ್ಮಾ ಸೀಮೀತ ಓವರ್ ಪಂದ್ಯದಲ್ಲಿ ಆಡಿಲ್ಲ. ಲಾಕ್ ಡೌನ್ ನಂತ್ರ ಶರ್ಮಾ ಯಾವುದೇ ಸೀಮಿತ ಓವರ್ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ. ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಮ್ 837 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
2021ರ ಐಪಿಎಲ್ ಆಟಗಾರರ ಹರಾಜಿಗೆ ಮುಹೂರ್ತ ಫಿಕ್ಸ್
ಬೌಲರ್ ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬೂಮ್ರಾ ಮೂರನೇ ಸ್ಥಾನದಲ್ಲಿದ್ದಾರೆ. ಬೂಮ್ರಾ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್ ವೇಗದ ಬೌಲರ್ ಟ್ರೆಂಟ್ ಬೌಲ್ಟ್ 722 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅಘ್ಫಾನಿಸ್ತಾನದ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ 701 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.