ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವೇನು ಕೈಕಟ್ಟಿಕೊಂಡು ಕುಳಿತಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರೆಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಈ ವಿಚಾರ ಕೋರ್ಟ್ ನಲ್ಲಿ ಇರುವುದರಿಂದ ನಾವು ಸುಮ್ಮನಿದ್ದೇವೆ. ಪದೇ ಪದೇ ಮಾತನಾಡಿದರೆ ನಾವು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದಾರೆ.
ಗಡಿ ಸಂಘರ್ಷದ ಬಗ್ಗೆ ಪುಸ್ತಕವನ್ನು ಬಿಡುಗಡೆ ಮಾಡುತ್ತಾರಂತೆ. ನಮ್ಮ ಬಳಿಯೂ ಸಾಕಷ್ಟು ದಾಖಲೆಗಳಿವೆ. ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.