ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಸುವರ್ಣಾವಕಾಶವಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಭದ್ರತಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.
pnbindia.in ವೆಬ್ಸೈಟ್ ಮಾಹಿತಿ ಪ್ರಕಾರ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು. ಒಟ್ಟು ನೂರು ಅಭ್ಯರ್ಥಿಗಳನ್ನು ಬ್ಯಾಂಕ್ ನೇಮಕ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,170ರಿಂದ 69,810 ರೂಪಾಯಿ ಸಂಬಳ ಸಿಗಲಿದೆ. ಇದ್ರ ಜೊತೆ ಡಿಎ ಸೇರಿದಂತೆ ಇತರ ಭತ್ಯೆ ಸಿಗಲಿದೆ.
ಶುಭ ಸುದ್ದಿ: 20 ಸಾವಿರ ಶಿಕ್ಷಕರ ನೇಮಕಾತಿ, ಸಚಿವ ಸುರೇಶ್ ಕುಮಾರ್ ಮಾಹಿತಿ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. 21 ವರ್ಷದಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಜೊತೆ 500 ರೂಪಾಯಿ ಪಾವತಿಸಬೇಕು. ಮಹಿಳೆಯರು ಹಾಗೂ ಕಾಯ್ದಿರಿಸಿದ ವರ್ಗದಲ್ಲಿ ಬರುವ ಅಭ್ಯರ್ಥಿಗಳು 50 ರೂಪಾಯಿ ಪಾವತಿ ಮಾಡಬೇಕು. ಅಧಿಕೃತ ವೆಬ್ಸೈಟ್ ನಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿದೆ.