alex Certify BIG NEWS: ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ತಯಾರಿ, ಪೂರ್ವಭಾವಿ ಸಭೆಗೆ ಸಮಯ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ತಯಾರಿ, ಪೂರ್ವಭಾವಿ ಸಭೆಗೆ ಸಮಯ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2021 -22 ನೇ ಸಾಲಿನ ಆಯವ್ಯಯ ಪೂರ್ವಭಾವಿ ಇಲಾಖಾವಾರು ಚರ್ಚೆಯನ್ನು ಸಚಿವರೊಂದಿಗೆ ನಡೆಸಲಿದ್ದಾರೆ.

ಫೆಬ್ರವರಿ 8 ರಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ಯಮ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಕಾರ್ಮಿಕ ಇಲಾಖೆ ಸಭೆ ನಡೆಯಲಿದೆ.

ಫೆಬ್ರವರಿ 9 ರಂದು ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆಡಳಿತ, ಗೃಹ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಸಭೆ ನಡೆಯಲಿದೆ.

ಫೆಬ್ರವರಿ 10 ರಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಹಕಾರ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಪ್ರವಾಸೋದ್ಯಮ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಸಣ್ಣ ನೀರಾವರಿ ಇಲಾಖೆ ಸಭೆ ನಡೆಯಲಿದೆ.

ಫೆಬ್ರವರಿ 11 ರಂದು ಪಶುಸಂಗೋಪನೆ, ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ತೋಟಗಾರಿಕೆ, ರೇಷ್ಮೆ, ನಗರಾಭಿವೃದ್ಧಿ ಸಚಿವರೊಂದಿಗೆ ಸಮಾಲೋಚನೆ ನಡೆಯಲಿದೆ.

ಫೆಬ್ರವರಿ 12 ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಣ್ಣಕೈಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಜವಳಿ, ಅಲ್ಪಸಂಖ್ಯಾತರ ಕಲ್ಯಾಣ, ಮೂಲಸೌಕರ್ಯಗಳ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಯಲಿದೆ.

ಫೆಬ್ರವರಿ 15 ರಂದು ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಫೆಬ್ರವರಿ 18 ರಂದು ವಸತಿ, ಇಂಧನ, ಸಾರಿಗೆ, ಅಬಕಾರಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಫೆಬ್ರವರಿ 19 ರಂದು ಪೌರಾಡಳಿತ, ಸ್ಥಳೀಯ ಸಂಸ್ಥೆ, ಸಕ್ಕರೆ, ಯುವಜನ ಸೇವೆ, ಕ್ರೀಡೆ, ಯೋಜನೆ, ಕಾರ್ಯಕ್ರಮ ಅನುಷ್ಠಾನ, ವಾಣಿಜ್ಯ ತೆರಿಗೆ, ಅಬಕಾರಿ, ಸಾರಿಗೆ ಮುದ್ರಾಂಕ ಮತ್ತು ನೋಂದಣಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಸಭೆ ನಡೆಯಲಿದೆ.

ಫೆಬ್ರವರಿ 22 ರಂದು ವಾಣಿಜ್ಯ ಸಂಘ-ಸಂಸ್ಥೆಗಳು, ಸಾರಿಗೆ ಸಂಸ್ಥೆಗಳು, ಅಬಕಾರಿ ಸಂಘ-ಸಂಸ್ಥೆಗಳು, ಭೂ ಮಾರುಕಟ್ಟೆ ಸಂಘ ಸಂಸ್ಥೆಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಫೆಬ್ರವರಿ 23 ರಂದು ದಲಿತ ಸಂಘಟನೆಗಳ ಮುಖಂಡರ ಭೇಟಿ, ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಅಲ್ಪಸಂಖ್ಯಾತ ಸಮುದಾಯದ ಸಂಸತ್ ಸದಸ್ಯರು ಮತ್ತು ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...