ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಕಲ್ಲು ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಚರ್ಚೆಗೆ ಅವಕಾಶ ನೀಡುವಂತೆ ಕೇಳಿಬಂದ ಮನವಿಗೆ ಪ್ರತಿಕ್ರಿಯೆ ನೀಡಿದ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಹುಣಸೋಡು ಸ್ಫೋಟ ಪ್ರಕರಣದ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ್ದಾರೆ.
ನಿಯಮ 60 ರ ನಿಲುವಳಿ ಸೂಚನೆಯಡಿ ನೀಡಲಾದ ನೋಟಿಸ್ ನಿಯಮ 69 ಕ್ಕೆ ಬದಲಾಯಿಸಿ ಸೋಮವಾರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಸ್ಪೀಕರ್ ತಿಳಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಹುಣಸೋಡು ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ನಂತರದಲ್ಲಿ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸ್ಪೋಟಕ ಪ್ರಕರಣದ ಬಗ್ಗೆ ಚರ್ಚೆಯಾಗಲಿ, ಸರ್ಕಾರದಿಂದ ಉತ್ತರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.