ನವದೆಹಲಿ: ಫ್ರಂಟ್ಲೈನ್ ವಾರಿಯರ್ಸ್ ಗೆ ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ.
ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ ಬರೆಯಲಾಗಿದ್ದು, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವಂತೆ ತಿಳಿಸಲಾಗಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ ಬರೆದು ಈ ಕುರಿತಾಗಿ ಸೂಚನೆ ನೀಡಲಾಗಿದೆ.
ಸದ್ಯ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಎರಡು ಕೋಟಿಯಷ್ಟು ಇರುವ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಪೊಲೀಸರು, ಸೇನೆಯ ಯೋಧರು, ಪ್ಯಾರಾ ಮಿಲಿಟರಿ ಪಡೆ, ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಸಿಬ್ಬಂದಿಗೆ ಲಸಿಕೆ ನೀಡುವಂತೆ ತಿಳಿಸಲಾಗಿದೆ.