ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆಗೆ ಮುಖ್ಯ ಮಾಹಿತಿ ಇಲ್ಲಿದೆ. ಪಡಿತರ ದುಬಾರಿಯಾಗುವ ಸಾಧ್ಯತೆ ಇದೆ.
ಆರ್ಥಿಕ ಸಮೀಕ್ಷೆಯ ಶಿಫಾರಸಿನ ಅನ್ವಯ ಪಡಿತರ ದರ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. 2020 – 21 ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ಪಡಿತರ ಅಂಗಡಿಗಳ ಮೂಲಕ ಮಾರಾಟ ಮಾಡುವ ಆಹಾರ ಧಾನ್ಯಗಳ ಬೆಲೆ ಹೆಚ್ಚಳಕ್ಕೆ ಸಲಹೆ ನೀಡಲಾಗಿದೆ. ಆರ್ಥಿಕ ಸಮೀಕ್ಷೆಯ ಶಿಫಾರಸನ್ನು ಸರ್ಕಾರ ಒಪ್ಪಿದಲ್ಲಿ ಪಡಿತರ ದುಬಾರಿಯಾಗಲಿದೆ.
ದೇಶದಲ್ಲಿ ಸುಮಾರು 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಮೂಲಕ ಆಹಾರ ಧಾನ್ಯ ವಿತರಿಸಲಾಗುತ್ತಿದೆ. 2013 ರಿಂದ ಪಡಿತರ ಆಹಾರ ಧಾನ್ಯಗಳ ದರ ಪರಿಷ್ಕರಣೆ ಮಾಡಿಲ್ಲ. ಈ ಅವಧಿಯಲ್ಲಿ ಗೋಧಿ ಮತ್ತು ಅಕ್ಕಿ ದರ ಹೆಚ್ಚಾಗಿದೆ. ಹೀಗಾಗಿ, ಪಡಿತರ ದರ ಪರಿಷ್ಕರಣೆ ಮಾಡಬೇಕೆಂದು ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಸರ್ಕಾರದಿಂದ ಅಕ್ಕಿ, ಗೋಧಿ, ಬೇಳೆಕಾಳುಗಳನ್ನು ಕಡಿಮೆ ಬೆಲೆಗೆ, ಉಚಿತವಾಗಿ ವಿತರಿಸಲಾಗುತ್ತಿದೆ.