ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿ ನೀಡಲು ಸಿದ್ಧ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಹೇಳಿದ್ದನ್ನು ನಾನು ಕೂಡ ಪುನರುಚ್ಚರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಅವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
ರೈತರೊಂದಿಗೆ ಮಾತುಕತೆಗೆ ಸಿದ್ಧ ಎನ್ನುವ ಪ್ರಧಾನಿಯವರ ಹೇಳಿಕೆ ಬಗ್ಗೆ ಮಾತನಾಡಿದ ಟಿಕಾಯತ್, ಒತ್ತಡದಿಂದ ಯಾವುದೇ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಚರ್ಚೆ ನಡೆಸುತ್ತೇವೆ. ಪ್ರಧಾನಮಂತ್ರಿ ನಮ್ಮವರು. ಅವರ ಸಲಹೆ, ಹೇಳಿಕೆಗೆ ಕೃತಜ್ಞರಾಗಿದ್ದೇವೆ. ಅದನ್ನು ಗೌರವಿಸುತ್ತೇವೆ. ನಮ್ಮ ಜನರನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.