ಮಂಗಳೂರು: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಬಡ ಕುಟುಂಬದವರಿಗೆ ಹಕ್ಕುಪತ್ರ ನೀಡುವ 94 ಸಿ ಯೋಜನೆಯಡಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ.
ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪದ ಕೊಂಬಾರು ಶಾಲೆಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಡೀಮ್ಡ್ ಫಾರೆಸ್ಟ್, ಕಂದಾಯ ಭೂಮಿ ವಿಚಾರಗಳ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕರಾವಳಿಯ ಎಲ್ಲ ಶಾಸಕರ ನಿಯೋಗ ತೆರಳಿ ವಿಶೇಷ ಸಭೆಗೆ ಮನವಿ ಮಾಡಲಾಗಿದೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಬಡ ಕುಟುಂಬಗಳಿಗೆ 94 ಸಿ ಯೋಜನೆಯಡಿ ಹಕ್ಕುಪತ್ರ ನೀಡಲು ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ಕೊಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.