2021ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶದಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದ್ರು.
ದೇಶದಲ್ಲಿ ಮುಂದಿನ 3 ವರ್ಷಗಳಲ್ಲಿ ಒಟ್ಟು 7 ಜವಳಿ ಪಾರ್ಕ್ಗಳನ್ನ ಸ್ಥಾಪನೆ ಮಾಡಲಾಗುವದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜವಳಿ ಪಾರ್ಕ್ಗಳು ಜಾಗತಿಕ ಮಟ್ಟದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಹೀಗಾಗಿ ಉತ್ಪಾದನಾ ಕ್ಷೇತ್ರಕ್ಕೆ 1.94 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಪಿಎಲ್ಐ ಯೋಜನೆಯ ಹೆಚ್ಚುವರಿಯಾಗಿ ಈ ಯೋಜನೆಯನ್ನ ಘೋಷಿಸಲಾಗಿದೆ. ಅಲ್ಲದೇ ಈ ಮೂಲಕ ದೇಶದಲ್ಲಿ 1 ಕೋಟಿ ಉದ್ಯೋಗಾವಕಾಶಗಳನ್ನ ಹೆಚ್ಚಿಸುವ ಭರವಸೆ ನೀಡಲಾಗಿದೆ.