ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಹೆಚ್ ಕೋರ್ಟ್ ಹಲ್ಲೆ ಕೋರ ಮಧುಕರ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ್ದು, ನಾಳೆ ಶಿಕ್ಷೆ ಪ್ರಕಟಿಸಲಿದೆ.
2013ರಲ್ಲಿ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಮಾಡಿದ್ದ ಮಧುಕರ ರೆಡ್ಡಿ ಆರೋಪಿ ಎಂದು ಕೋರ್ಟ್ ತೀರ್ಪು ನೀಡಿದೆ. 2013ರ ನವೆಂಬರ್ 19 ರಂದು ಬೆಂಗಳೂರು ಬಿಬಿಎಂಪಿ ಪ್ರಧಾನ ಕಚೇರಿ ಎದುರಿನ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಉದಯ್ ಅವರ ಮೇಲೆ ಮಧುಕರ ರೆಡ್ಡಿ ಮಚ್ಚು ಬೀಸಿ ಹಲ್ಲೆ ಮಾಡಿದ್ದ, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಜ್ಯೋತಿ ಉದಯ್ ಕುಸಿದು ಬಿದ್ದಿದ್ದರು.
ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆದು 8 ವರ್ಷಗಳ ನಂತರ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಆತನಿಗೆ ನಾಳೆ ಶಿಕ್ಷೆ ಪ್ರಕಟ ಮಾಡಲಾಗುವುದು. ಎಂ.ವಿ. ತ್ಯಾಗರಾಜ್ ಅಭಿಯೋಜಕರಾಗಿ ವಾದ ಮಂಡಿಸಿದ್ದರು.