ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹರಿಹರಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಜಾತಿನಿಂದನೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಜಾತಿನಿಂದನೆ ಮಾಡುತ್ತಿರುವ ಬಗ್ಗೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು ಎನ್ನಲಾಗಿದೆ.