alex Certify BIG BREAKING NEWS: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಎಸಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಎಸಿಬಿ

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಡಿಹೆಚ್ಒ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಳಬಾಗಿಲಿನಲ್ಲಿರುವ ಮನೆ ಮತ್ತು ಅವರ ಖಾಸಗಿ ಆಸ್ಪತ್ರೆ, ಚಿಂತಾಮಣಿಯಲ್ಲಿರುವ ಮನೆ ಮತ್ತು ಬೆಂಗಳೂರಿನಲ್ಲಿರುವ ಫ್ಲಾಟ್ ಸೇರಿದಂತೆ ಆರು ಕಡೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಹುಬ್ಬಳ್ಳಿ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಾಂಧಿನಗರದ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಶಿಗ್ಗಾವಿ ಮನೆ ಮೇಲೆ ದಾಳಿ ನಡೆಸಲಾಗಿದೆ.

ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಕೋಲಾರ, ಹುಬ್ಬಳ್ಳಿ ಸೇರಿ 10 ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...