ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬಂಟ್ವಾಳದ ಸೂರಿಕುಮೇರು ಮಸೀದಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.
ಮುಂಜಾಗೃತಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಅದೃಷ್ಟವಶಾತ್ ಈವರೆಗೆ ಅನಿಲ ಸೋರಿಕೆಯಾಗಿಲ್ಲ. ಹಾಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.
ಮಸೀದಿ ಧ್ವನಿವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳಸದಂತೆ ಸೂಚಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಟ್ಯಾಂಕರ್ ಎತ್ತುವ ಕಾರ್ಯಕ್ಕೆ ಮುಂದಾಗಿವೆ. ಒಟ್ಟಾರೆ ಗ್ಯಾಸ್ ಟ್ಯಾಂಕರ್ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.