ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಬಾಣಂತಿಯರು, ಗರ್ಭಿಣಿಯರ ಮನೆಮನೆಗೆ ಪೌಷ್ಟಿಕಾಂಶವಿರುವ ಆಹಾರ ಪೂರೈಕೆ ಮಾಡುತ್ತಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಅಂಗನವಾಡಿ ಕೇಂದ್ರಗಳು ಬಂದ್ ಆಗಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಮನೆ ಬಾಗಿಲಿಗೆ ಆಹಾರ ಪದಾರ್ಥ ವಿತರಿಸಲಾಗಿತ್ತು. ಅಂಗನವಾಡಿ ಕೇಂದ್ರಗಳು ಆರಂಭವಾದ ನಂತರ ಮಧ್ಯಾಹ್ನ ಬಿಸಿಯೂಟ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.