ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆದಿದೆ.
ಬಸವ ಜಯಮೃತ್ಯುಂಜಯ ಶ್ರೀಗಳು ಮತ್ತು ವಚನಾನಂದ ಶ್ರೀಗಳ ಹೋರಾಟ ಮುಂದುವರೆದಿದ್ದು, ಈ ನಡುವೆ ಶ್ರೀಗಳ ಮನವೊಲಿಕೆಗೆ ಸರ್ಕಾರ ಸಚಿವ ಸಿ.ಸಿ. ಪಾಟೀಲ್ ಅವರನ್ನು ಕಳಿಸಿದೆ. ಸ್ವಾಮೀಜಿಯವರೊಂದಿಗೆ ಚರ್ಚಿಸಲು ಸಚಿವರು ಚಿತ್ರದುರ್ಗಕ್ಕೆ ತೆರಳಿದ್ದಾರೆ.
ಹಿರಿಯೂರು ತಾಲ್ಲೂಕಿನ ಬುರುಜನಕೊಪ್ಪ ಗ್ರಾಮದಲ್ಲಿರುವ ಸ್ವಾಮೀಜಿ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಪಂಚಮಸಾಲಿ ಸಮಾಜದ ಮುಖಂಡರೊಂದಿಗೆ ಸಚಿವರು ಚರ್ಚೆ ನಡೆಸಲಿದ್ದಾರೆ. ಮೀಸಲಾತಿ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲವೆಂದು ಶ್ರೀಗಳು ಈಗಾಗಲೇ ಸ್ಪಷ್ಟಪಡಿಸಿದ್ದು, ಹೋರಾಟ ತೀವ್ರಗೊಳಿಸುವುದಾಗಿ ಹೇಳಿದ್ದಾರೆ.