ಬಜೆಟ್ 2021ರಲ್ಲಿ ಚಿನ್ನದ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವ ಘೋಷಣೆ ನಂತ್ರ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡು ಬರ್ತಿದೆ. ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಇಂದೂ ಇಳಿದಿದೆ. ಇಂದು ಬಂಗಾರದ ಬೆಲೆ 322 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಚಿನ್ನದ ಬೆಲೆ 10 ಗ್ರಾಂಗೆ 47,457 ರೂಪಾಯಿಯಾಗಿತ್ತು. ಇಂದು 322 ರೂಪಾಯಿ ಇಳಿಕೆಯೊಂದಿಗೆ ಬಂಗಾರದ ಬೆಲೆ 47,137 ರೂಪಾಯಿಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 1,825 ಡಾಲರ್ ಪ್ರತಿ ಔನ್ಸ್ ಆಗಿದೆ. ಗುರುವಾರ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡು ಬಂದಿದೆ.
ಗುರುವಾರ ಬೆಳ್ಳಿ ಬೆಲೆ 972 ರೂಪಾಯಿ ಇಳಿಕೆ ಕಂಡಿದ್ದು, ಕೆ.ಜಿ ಬೆಳ್ಳಿ ಬೆಲೆ 67,170 ರೂಪಾಯಿಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ 26.61 ಡಾಲರ್ ಪ್ರತಿ ಔನ್ಸ್ ಆಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಹೆಚ್ಚಳವಾಗಿದೆ. ರೂಪಾಯಿ 6 ಪೈಸೆ ಹೆಚ್ಚಳ ಕಂಡಿದೆ. ಇದು ಕೂಡ ಬಂಗಾರದ ಬೆಲೆ ಇಳಿಕೆಗೆ ಕಾರಣವಾಗಿದೆ.