ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬೇರೆಯವರನ್ನು ಕೂರಿಸಿ ಎಂದು ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದು ಕೇಂದ್ರ ಸರ್ಕಾರದ ನಿರ್ಧಾರ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಸಿಎಂ ಬಿ ಎಸ್ ವೈ ಅವರಿಗೆ ವಯಸ್ಸಾಗಿದೆ, ಬುದ್ಧಿ ಸ್ಥಿಮಿತದಲ್ಲಿ ಇಲ್ಲ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬೇರೆ ಲಿಂಗಾಯಿತರನ್ನು ಕೂರಿಸಬೇಕು ಎಂದು ಗುಡುಗಿದ್ದಾರೆ.
ರೈತರ ಸಾಲ ಮನ್ನಾ ಮಾಡಿದ ತಮಿಳುನಾಡು ಸರ್ಕಾರ
ನಿನ್ನೆ ಸರ್ಕಾರದ ನಿಯೋಗವನ್ನು ನಮ್ಮ ಬಳಿ ಕಳುಹಿಸಿ ಮೀಸಲಾತಿ ಬಗ್ಗೆ ಭರವಸೆ ನೀಡಿದರು. ಇಂದು ಸದನದಲ್ಲಿ ಮೀಸಲಾತಿ ಬಗ್ಗೆ ಕೇಂದ್ರದತ್ತ ಬೆರಳು ತೋರಿಸಿ ಹೈಕಮಾಂಡ್ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪನವವರಿಗೆ ಮರೆವು ಹೆಚ್ಚಾಗಿದೆ. ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡುವ ಹಕ್ಕು ರಾಜ್ಯ ಸರ್ಕಾರಕ್ಕಿದೆ ಎಂಬುದು ನಮಗೂ ಗೊತ್ತು. ಆದರೂ ಯಡಿಯೂರಪ್ಪ ಇಂಥ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.