ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಾಳೆ ರೈತ ಸಂಘಟನೆಗಳಿಂದ ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಕಡೆಗಳಲ್ಲಿ ರೈತರು ರಸ್ತೆತಡೆ ನಡೆಸಲಿದ್ದು ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ.
ದೇಶಾದ್ಯಂತ ರೈತ ಸಂಘಟನೆಗಳಿಂದ ರಸ್ತೆತಡೆ ನಡೆಸಲಿದ್ದು ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಮಾತ್ರ ರಸ್ತೆತಡೆ ನಡೆಸದಿರಲು ನಿರ್ಧರಿಸಲಾಗಿದೆ. ರೈತ ಸಂಘಟನೆಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರೈತರು ಕೈಗೊಂಡಿರುವ ರಸ್ತೆ ತಡೆ ಹೋರಾಟ ಬೆಂಬಲಿಸುವುದಾಗಿ ಹೇಳಿದ್ದಾರೆ.