ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರವೇಶ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ಪ್ರವೇಶ ದಿನಾಂಕವನ್ನು ಫೆಬ್ರವರಿ 13 ರವರೆಗೆ ವಿಸ್ತರಣೆ ಮಾಡಲಾಗಿದೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರವೇಶಕ್ಕೆ ನಾಳೆ ಕೊನೆ ದಿನವಾಗಿತ್ತು. ಫೆಬ್ರವರಿ 1 ರಿಂದ ಪ್ರಥಮ ಪಿಯುಸಿ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇವಲ ಪ್ರಥಮ ಪಿಯುಸಿ ಪ್ರವೇಶಕ್ಕೆ ಮಾತ್ರ ದಿನಾಂಕ ವಿಸ್ತರಣೆ ಮಾಡಲಾಗಿದೆ. ದ್ವಿತೀಯ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ ಮಾಡಲಾಗಿಲ್ಲ. ಈ ಕುರಿತಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.