ಬೆಂಗಳೂರು: ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ ಕಾರ್ಡ್ ನೀಡುವಂತೆ ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಶಿಫಾರಸು ಮಾಡಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ ಕಾರ್ಡ್ ನೀಡುವಂತೆ ಅವರು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯಾದ್ಯಂತ 48000 ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಅನುಕೂಲವಾಗುವಂತೆ ಡಿಜಿಟಲ್ ಹೆಲ್ತ್ ಕಾರ್ಡ್ ನೀಡಲು ತಿಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ, ವೈದ್ಯಕೀಯ ನೆರವು ಕಲ್ಪಿಸಲು ಅನುಕೂಲವಾಗುತ್ತದೆ. ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಪರಿಹಾರ ಸೂಚಿಸುವ ಜೊತೆಗೆ ಆರೋಗ್ಯ ರಕ್ಷೆ ನೀಡಬಹುದಾಗಿದೆ ಎಂದು ಹೇಳಲಾಗಿದೆ.