ಮಂಗಳೂರು: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇದೇ ಮೊದಲ ಬಾರಿಗೆ ಮಂಗಳಮುಖಿಯೋರ್ವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ದಕ್ಷಿಣ ಯುವ ಪ್ರಧಾನ ಕಾರ್ಯದರ್ಶಿಯಾಗಿ ಬ್ಯೂಟಿಷಿಯನ್, ಪರಿವರ್ತನ್ ಟ್ರಾನ್ಸ್ ಕ್ವೀನ್ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ಚುನಾವಣೆ ಜನವರಿ 10, 11 ಹಾಗೂ 12 ರಂದು ಆನ್ ಲೈನ್ ಮೂಲಕ ನಡೆದಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷೀತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಆಯ್ಕೆಯಾಗಿದ್ದಾರೆ.
ಸಂಜನಾ ದಕ್ಷಿಣ ಕನ್ನಡದಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿಯಾಗಿದ್ದಾರೆ.