ನವದೆಹಲಿ: ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಮುಂದಾಗುವ ಮಾಲೀಕರಿಗೆ ಆಕರ್ಷಕ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ.
ಮಾಲಿನ್ಯಕಾರಕ, ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕುವ ಮಾಲೀಕರಿಗೆ ವಾಹನ ಖರೀದಿಸುವ ಸಂದರ್ಭದಲ್ಲಿ ಆಕರ್ಷಕ ಸೌಲಭ್ಯ ಒದಗಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿರುವ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಸ್ಕ್ರಾಪಿಂಗ್ ಪಾಲಿಸಿ ಅನ್ವಯ ಉತ್ತೇಜನ ಕ್ರಮ ಕೈಗೊಳ್ಳಲಾಗುತ್ತದೆ.
ಆಟೋಮೊಬೈಲ್ ಉದ್ಯಮದ ಬೆಳವಣಿಗೆ ಶೇಕಡ 30ರಷ್ಟು ಹೆಚ್ಚಾಗಲಿದ್ದು, 4.5 ಲಕ್ಷ ಕೋಟಿ ರೂ.ನಿಂದ 10 ಲಕ್ಷ ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸುವ ನಿರೀಕ್ಷೆಯಿದೆ ಎಂದು ನಿತಿನ್ ಗಡ್ಕರಿಗೆ ಹೇಳಿದ್ದಾರೆ.