ಬೆಂಗಳೂರು: ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.
ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಕೇಂದ್ರ ಸ್ಥಾನವಾಗಿ ಮಾಡಲಾಗಿದ್ದು, ನೂತನ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ.
ದೇಶದಲ್ಲೇ ಮೊದಲ ಪ್ರಯೋಗ: ಮಾಡ್ಯೂಲರ್ ಐಸಿಯು ಲೋಕಾರ್ಪಣೆ ಮಾಡಿದ ಸಿಎಂ ಬಿ.ಎಸ್.ವೈ.
ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಈ 6 ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರಿಸಲಾಗಿದೆ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.