alex Certify BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಖರ್ಗೆಗೆ ಮೋದಿ ಬೆಂಬಲಿಗರಿಂದ ಜೀವ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಂಗ್ರೆಸ್ ಹಿರಿಯ ನಾಯಕ ಖರ್ಗೆಗೆ ಮೋದಿ ಬೆಂಬಲಿಗರಿಂದ ಜೀವ ಬೆದರಿಕೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ. ಮಧ್ಯಪ್ರದೇಶದಿಂದ ಕರೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಹಾಕಲಾಗಿದೆ.

ಮೋದಿಯವರ ಬಗ್ಗೆ ನೀವು ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ. ನೀವು ಅವರ ವಿರುದ್ಧ ಮಾತನಾಡುವುದು ಏಕೆ? ಎಂದು ಪ್ರಶ್ನಿಸಿ ಮೋದಿ ವಿರುದ್ಧ ಮಾತನಾಡಬಾರದೆಂದು ಬೆದರಿಕೆ ಕರೆ ಹಾಕಲಾಗಿದೆ.

ಕಾಂಗ್ರೆಸ್ ಪಕ್ಷದ ಸಂಸದ ನಾಸಿರ್ ಹುಸೇನ್ ದೆಹಲಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಭಾಷಣದ ನಂತರ ನಮ್ಮ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಲಾಗಿದೆ. ಇದಾದ ನಂತರ ಮಧ್ಯಪ್ರದೇಶದಿಂದ ಬೆದರಿಕೆ ಕರೆ ಬಂದಿದೆ. ಅವಾಚ್ಯ ಪದಗಳಿಂದ ನಿಂದಿಸಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಖರ್ಗೆ ಅವರಿಗೆ ಅನೇಕ ಬಾರಿ ಜೀವ ಬೆದರಿಕೆ ಕರೆ ಬಂದಿದ್ದು, ಎಫ್ಐಆರ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿಸಿಲ್ಲ. ನಾವು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಈಗಲೂ ದೂರು ನೀಡುತ್ತೇವೆ ಎಂದು ನಾಸಿರ್ ಹುಸೇನ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...