ಬೆಂಗಳೂರು: ಪಂಚಮಸಾಲಿ ಸಮುದಾಯ, ಕುರುಬ ಸಮುದಾಯ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ, ಸಮಾವೇಶಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಇದೀಗ ವಾಲ್ಮೀಕಿ ಸಮುದಾಯ ತಮಗೆ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಿಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ಹೇರಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ವೈಗೆ ಮತ್ತೊಂದು ಮೀಸಲಾತಿ ಸಂಕಷ್ಟ ಎದುರಾಗಿದೆ.
ಇಂದು ದಾವಣಗೆರೆಯ ರಾಜಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ಘೋಷಣೆ ಮಾಡಲಿದ್ದಾರೆ ಎಂಬುದು ಸಮುದಾಯದವರ ನಿರೀಕ್ಷೆ.
ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್…! ಶೀಘ್ರದಲ್ಲೇ ಸಿಗಲಿದೆ ಡಿಎ ಕುರಿತ ಗುಡ್ ನ್ಯೂಸ್
ಈ ಕುರಿತು ಮಾತನಾಡಿರುವ ಸಚಿವ ಬಿ.ಶ್ರೀರಾಮುಲು, ಇಂದು ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಸಿಎಂ ಯಡಿಯೂರಪ್ಪ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಘೋಷಿಸಲಿದ್ದಾರೆ ಎಂಬ ವಿಶ್ವಾಸವಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಬಳಿಕ ಮೀಸಲಾತಿ ಹೆಚ್ಚಳದ ಬಗ್ಗೆ ನಿರ್ಧರಿಸುವ ಭರವಸೆಯನ್ನು ಈ ಹಿಂದೆ ನೀಡಿದ್ದರು. ಈ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಘೋಷಣೆ ಖಚಿತ ಎಂದು ಹೇಳಿದರು.